ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಮುಂಬರುವ ಬಿಹಾರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಸೆಪ್ಟೆಂಬರ್ 24ರಂದು ಪಾಟ್ನಾದಲ್ಲಿ ಕಾಂಗ್ರೆಸ್ ಸಿಡಬ್ಲುಸಿ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸಭೆಯಲ್ಲಿ ಬಿಹಾರ ಚುನಾವಣೆಗೆ ಗೆಲುವಿಗೆ ಸಂಬಂಧಿಸಿದ ವಿಚಾರಗಳು, ಮುಂದೆ ಬರುವಂತಹ ಚುನಾವಣೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳು, ಮತಗಳ್ಳತನ ಪ್ರಕರಣಗಳಿಗೆ ಕುರಿತಾದ ಚರ್ಚೆಗಳು ನಡೆಯಲಿವೆಯಂತೆ.
ಬಿಹಾರದ ಸಂಸದರು, ಶಾಸಕರು, ಪರಿಷತ್ ಸದಸ್ಯರು, ಎಐಸಿಸಿ ಕಾರ್ಯದರ್ಶಿಗಳನ್ನು ಒಳಗೊಂಡಂತಹ ಸಮಿತಿಯೊಂದನ್ನು ಈ ಸಭೆಗಾಗಿ ರಚನೆ ಮಾಡಲಾಗಿದೆ. ಇದರಲ್ಲಿ ಒಟ್ಟು 39 ಸದಸ್ಯರಿದ್ದಾರೆ. ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಇತರೆ ನಾಯಕರು ಭಾಗವಹಿಸಲಿದ್ದಾರೆ.