ಪ್ರಜಾಸ್ತ್ರ ಸುದ್ದಿ
ಹಾವೇರಿ(Haveri): ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ದೊಡ್ಡ ಮಟ್ಟದ ಜಾಟಪಟಿ ನಡೆಯುತ್ತಿದೆ. ಹೈಕಮಾಂಡ್ ಮಟ್ಟದಲ್ಲಿಯೂ ಬಗೆಹರಿಸುವ ಕೆಲಸ ನಡೆಯುತ್ತಿದ್ದರೂ ಆಗುತ್ತಿಲ್ಲ. ಈ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ, ರಾಜ್ಯದಲ್ಲಿ ಕುರ್ಚಿಗಾಗಿ ನಡೆಯುತ್ತಿರುವ ಜಟಾಪಟಿ ತೀವ್ರವಾಗಿ. ಕಾಂಗ್ರೆಸ್ ಹೈಕಮಾಂಡ್ ಅಸಹಾಯಕವಾಗಿದೆ. ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಇದರಿಂದಾಗಿ ರೈತರು ಸೇರಿದಂತೆ ಎಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.
ಇಬ್ಬರು ನಾಯಕರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಇದೇ ರೀತಿ ಮುಂದುವರೆದರೆ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಆಗುವ ಸಾಧ್ಯತೆಯಿದೆ. ಎರಡ್ಮೂರು ಸೂತ್ರ ಕೊಟ್ಟರೂ ಇಬ್ಬರು ನಾಯಕರು ಒಪ್ಪುತ್ತಿಲ್ಲ. ಹೀಗಾಗಿ ಡಾರ್ಕ್ ಹಾರ್ಸ್ ರೇಸಿಗೆ ಬರುವ ಸಾಧ್ಯತೆಯಿದೆ ಎಂದು ಹಾವೇರಿಯಲ್ಲಿ ಹೇಳಿದರು.




