ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ರಾಷ್ಟ್ರ ರಾಜಕೀಯದ ಚಿತ್ತ ಇಂದು ಜಮ್ಮು ಮತ್ತು ಕಾಶ್ಮೀರ್ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶದ ಮೇಲಿದೆ. ಕಾಂಗ್ರೆಸ್(Congress) ಹಾಗೂ ಬಿಜೆಪಿ(BJP) ಒಂದೊಂದು ರಾಜ್ಯದಲ್ಲಿ ಮುನ್ನಡೆ ಸಾಧಿಸಿವೆ. ದಶಕಗಳ ಬಳಿಕ ಚುನಾವಣೆ ನಡೆಯುತ್ತಿರುವ ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಫ್ ರೆನ್ಸ್ ಮೈತ್ರಿಯಾಗಿ ಕಣಕ್ಕೆ ಇಳಿದಿವೆ. ಇನ್ನು ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧಿಸುವತ್ತ ಹೆಜ್ಜೆ ಇಟ್ಟಿದೆ.
ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಹಾಗೂ ಎನ್ ಸಿಸಿ 48 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 26, ಪಿಡಿಪಿ 3, ಜೆಕೆಪಿಸಿ(JKPS) 1 ಹಾಗೂ ಪಕ್ಷೇತರರು 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇನ್ನು ಹರಿಯಾಣದಲ್ಲಿ ಬಿಜೆಪಿ 49, ಕಾಂಗ್ರೆಸ್ 35, ಎನ್ ಎಲ್ ಡಿ(NLD) 2 ಹಾಗೂ ಪಕ್ಷೇತರರು 5 ಕ್ಷೇತ್ರಗಳಲ್ಲಿ ಮುಂದೆ ಇದ್ದಾರೆ. ಹರಿಯಾಣದಲ್ಲಿ ದೇಶದ ಶ್ರೀಮಂತ ಮಹಿಳಾ ಉದ್ಯಮಿ ಸಾವಿತ್ರಿ ಜಿಂದಾಲ್ ಹಿಸಾರ್ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನು ಜುಲಾನ್ ಕ್ಷೇತ್ರದಲ್ಲಿ ಮಹಿಳಾ ಕುಸ್ತಿಪಟು ವಿನೇಶ್ ಪೋಗೆಟ್ ಮುನ್ನಡೆ ಇದ್ದು, ಬಿಜೆಪಿಯ ಯೋಗೇಶ್ ಭೈರಾಗಿ ಹಿನ್ನಡೆ ಹೊಂದಿದ್ದಾರೆ.