ಪ್ರಜಾಸ್ತ್ರ ಸುದ್ದಿ
ಚಳ್ಳಕೆರೆ(Challakere): ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಹಾಗೂ ಅವರ ಸಹೋದರರ ನಿವಾಸದ ಮೇಲೆ ಶುಕ್ರವಾರ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಚಿತ್ರದುರ್ಗ ಚಳ್ಳಕೆರೆಯಲ್ಲಿರುವ ನಾಲ್ಕು ಮನೆಗಳು, ಚಿತ್ರದುರ್ಗ, ಬೆಂಗಳೂರು, ಗೋವಾ ಸೇರಿದಂತೆ ಇತರೆಡೆ ಶಾಸಕರಿಗೆ ಸಂಬಂಧಿಸಿದ ಫ್ಲಾಟ್, ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
ಶಾಸಕರ ಸಹೋದರರಾದ ಕೆ.ಸಿ ನಾಗರಾಜ್, ಕೆ.ಸಿ ತಿಪ್ಪೇಸ್ವಾಮಿ ಅವರ ನಿವಾಸದ ಮೇಲೂ ದಾಳಿ ಮಾಡಲಾಗಿದೆ. ಆನ್ಲೈನ್ ಗೇಮಿಂಗ್ ಪ್ರಕರಣದಲ್ಲಿ ಶಾಸಕರ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದ್ದು, ಉದ್ಯಮಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಇನ್ನೊಂದು ಕಡೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಯುವ ನಾಯಕಿ ಕುಸುಮಾ ಮನೆಯ ಮೇಲೂ ದಾಳಿ ನಡೆಸಲಾಗಿದೆ.