ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬೇಲೇಕೇರಿಯ ಅದಿರು ಕಳ್ಳತನ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 7 ವರ್ಷ ಕಠಿಣ ಶಿಕ್ಷೆ ವಿಧಿಸಿದೆ. ಅಲ್ಲದೆ ಬರೋಬ್ಬರಿ 44 ಕೋಟಿ ರೂಪಾಯಿ ದಂಡ ವಿಧಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ಶಿಕ್ಷೆ ಪ್ರಕಟಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಶಾಸಕನಿಗೆ ದೊಡ್ಡ ಸಂಕಷ್ಟ ಎದುರಾಗಿದೆ.
ಮುತ್ತಿಗೆ ಹಾಕಿಕೊಂಡಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೆ ಸಾಗಾಟ ಮಾಡಿದ ಪ್ರಕರಣದಲ್ಲಿ ಶಿಕ್ಷೆ ಪ್ರಕಟಿಸಲಾಗಿದೆ. ಶಾಸಕ ಸತೀಶ್ ಸೈಲ್ ಜೊತೆಗೆ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ್ ಶಿಪ್ಪಿಂಗ್ ಅವರನ್ನು ದೋಷಿ ಎಂದು ಹೇಳಿ ತೀರ್ಪು ಕಾಯ್ದಿರಿಸಿತ್ತು. ಇಂದು ಶಿಕ್ಷೆ ಪ್ರಕಟಿಸಿದೆ. 2 ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆಯಾದರೆ ಶಾಸಕತ್ವ ರದ್ದಾಗುತ್ತೆ. ಇಲ್ಲಿ 7 ವರ್ಷ ಕಠಿಣ ಶಿಕ್ಷೆಯಾಗಿದ್ದು, ಸತೀಶ್ ಸೈಲ್ ಶಾಸಕ ಸ್ಥಾನ ಅನರ್ಹಗೊಳ್ಳಲಿದೆ.