ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆ ಹಾಗೂ ಭಾರೀ ದಂಡ ವಿಧಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಪ್ರಸ್ನಿಸಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಬುಧವಾರ ವಿಚಾರಣೆ ನಡೆಸಿದ ಕೋರ್ಟ್ ಸತೀಶ್ ಸೈಲ್ ಸೇರಿ ಇತರೆ ಆರೋಪಿಗಳ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಆದೇಶ ಹೊರಡಿಸಿದೆ. ಇದರಿಂದಾಗಿ ಇವರೆಲ್ಲರಿಗೂ ಸಾಕಷ್ಟು ನಿರಾಳವಾಗಿದೆ.
ಎಂ.ನಾಗಪ್ರಸನ್ನ ಅವರಿದ್ದ ಪೀಠ ಶಿಕ್ಷೆಯನ್ನು ಅಮಾನತುಗೊಳಿಸಿದೆ. ದಂಡದ ಮೊತ್ತದ ಶೇಕಡ 25ರಷ್ಟನ್ನು 6 ವಾರಗಳ ಒಳಗೆ ವಿಚಾರಾಣಾಧೀನ ನ್ಯಾಯಾಲಯದಲ್ಲಿ ಠೇವಣಿ ಇಡುವ ಷರತ್ತು ವಿಧಿಸಿ ಶಿಕ್ಷೆಯನ್ನು ಅಮನಾತುಗೊಳಿಸಿದೆ. ಹೀಗಾಗಿ ಶಾಸಕ ಸತೀಶ್ ಸೈಲ್ ಸೇರಿ ಇತರರು ನಾಳೆ ಬಿಡುಗಡೆಯಾಗುವ ಸಾಧ್ಯತೆಯಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ 6 ಪ್ರಕರಣಗಳಲ್ಲಿ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಜೊತೆಗೆ ಬರೋಬ್ಬರಿ 44 ಕೋಟಿ ರೂಪಾಯಿ ದಂಡ ವಿಧಿಸಿತ್ತು.