ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಒಂದು ಕಡೆ ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ಪ್ರಾರಂಭಿಸಿದೆ. ಮತ್ತೊಂದು ಕಡೆ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಪೆಟ್ರೋಲ್, ಡೀಸೆಲ್, ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಶುಕ್ರವಾರ ನಗರದಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ಭವನದಿಂದ ಚನ್ನಮ್ಮ ವೃತ್ತದ ತನಕ ಮೆರವಣಿಗೆ ನಡೆಸಿ ಕೇಂದ್ರದ ವಿರುದ್ಧ ಧಿಕ್ಕಾರ ಕೂಗಲಾಯಿತು. ಕೆಲವರು ತಲೆ ಮೇಲೆ ಸಿಲಿಂಡರ್ ಹೊತ್ತುಕೊಂಡು ಆಕ್ರೋಶ ಹೊರ ಹಾಕಿದರು. ಈ ವೇಳೆ ಶಾಸಕ ಆಸೀಫ್ ಸೇಠ್, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪಂ, ಕೆಪಿಸಿಸಿ ಸದಸ್ಯ ಮಲ್ಲನಗೌಡ ಪಾಟೀಲ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಜೆ ಪ್ರದೀಪ್, ಯುವ ಕಾಂಗ್ರೆಸ್ ಅಧ್ಯಕ್ಷ ಕಾರ್ತಿಕ್ ಪಾಟೀಲ ಸೇರಿದಂತೆ ಅನೇಕರು ಭಾಗವಹಿಸಿದ್ದರು.