ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರ ಸ್ಫೋಟಿಸಲು ಸಂಚು ರೂಪಿಸಲಾಗಿತ್ತು ಎಂದು ಹೇಳಲಾಗುತ್ತಿದ್ದು, ಶಂಕಿತ ಉಗ್ರ ಅಬ್ದುಲ್ ರೆಹಮಾನ್ ಎಂಬಾತನನ್ನು ಬಂಧಿಸಲಾಗಿದೆ. ಗುಜರಾತಿನ ಎಟಿಎಸ್ ನಡೆಸಿದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ 19 ವರ್ಷದ ಅಬ್ದುಲ್ ರೆಹಮಾನ್ ಎಂಬಾತನನ್ನು ಹರಿಯಾಣದ ಫರಿದಾಬಾದ್ ನಲ್ಲಿ ಪಾಳುಬಿದ್ದ ಮನೆಯೊಂದರಲ್ಲಿ ಬಂಧಿಸಲಾಗಿದೆ. ಗುಪ್ತಚರ ಇಲಾಖೆ ನಡೆದಿ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ.
ಬಂಧತನೊಂದಿಗೆ ಎರಡು ಜೀವಂತ ಹ್ಯಾಂಡ್ ಗ್ರೆನೇಡ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರು ಭಯೋತ್ಪಾದಕರಿದ್ದರು ಎಂದು ಹೇಳಲಾಗುತ್ತಿದ್ದು, ಒಬ್ಬನನ್ನು ಗುರುತಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದನಂತೆ. ಹರಿಯಾಣ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಇತನನ್ನು ಬಂಧಿಸಲಾಗಿದೆ. ಬಂಧಿತ ಶಂಕಿತ ಉಗ್ರನಿಂದ ಮಾಹಿತಿ ಪಡೆಯಲಾಗುತ್ತಿದೆ.