ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಜಿಲ್ಲೆಯ ತಿಕೋಟ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯರಾದ ಮಧು ಲಮಾಣಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚಿಸಿ, ನವೆಂಬರ್ 26, 1949 ರಂದು ದೇಶಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಆ ದಿನವನ್ನ ಸಂವಿಧಾನ ಸಮರ್ಪಣಾ ದಿನವಾಗಿ ಆಚರಿಸಲಾಗುತ್ತಿದೆ. ದೇಶದ ಪ್ರತಿಯೊಬ್ಬ ಪ್ರಜೆಗೆ ಸಂವಿಧಾನ ದಾರಿದೀಪ. ಕಾನೂನು, ನ್ಯಾಯ, ನೀತಿ, ಸಮಾನತೆ, ಸಹಬಾಳ್ವೆ ತತ್ವಗಳ ತಳಹದಿಯ ಮೇಲೆ ನಿಂತಿದೆ. ಎಲ್ಲರೂ ಸಂವಿಧಾನವನ್ನು ಗೌರವಿಸಿ, ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಬೇಕು ಎಂದರು.
ನಂತರ ಕಿರಿಯ ತರಬೇತಿ ಅಧಿಕಾರಿಗಳಾದ ನಾರಾಯಣ ಮೇತ್ರಿ ಅವರು ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಬೋಧಿಸಿದರು. ಇದಕ್ಕು ಮೊದಲು ಕಾಲೇಜಿನ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋ ಹಾಗೂ ಸಂವಿಧಾನ ಪೀಠಿಕೆಗೆ ಹೂವಿನ ಹಾರಹಾಕಿ, ಗೌರವ ಸಲ್ಲಿಸಲಾಯಿತು. ಈ ವೇಳೆ ಕಿರಿಯ ತರಬೇತಿ ಅಧಿಕಾರಿಗಳಾದ ದಾನಯ್ಯಾ ಹಿರೇಮಠ, ಶಿವಪ್ಪ ಚಪ್ಪರ, ಅನಿಲ ಕಲಾಲ ಸೇರಿದಂತೆ ಸಂಸ್ಥೆಯ ಎಲ್ಲ ಬೋಧಕ ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ತರಬೇತಿದಾರರು ಹಾಜರಿದ್ದರು.