ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಗುಮ್ಮಟನಗರಿ ಜಿಲ್ಲೆಯಾದ್ಯಂತ ಕಳೆದೊಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ಸೆಪ್ಟೆಂಬರ್ ಕೊನೆಯಲ್ಲಿದ್ದರೂ ಮಳೆಯ ಆರ್ಭಟ ಕಡಿಮೆಯಾಗಿಲ್ಲ. ಸತತವಾಗಿ ಮಳೆಯಾಗುತ್ತಿರುವುದರಿಂದ ಜನರು ಇದೇನು ಮಲೆನಾಡೋ ಅಥವ ಮುಗಿಲಿಗೆ ತೂತು ಬಿದ್ದಿದ್ದೆಯೋ ಎಂದು ಕೇಳುವಂತವಾಗಿದೆ. ನಿರಂತರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ವ್ಯಾಪಾರ, ವಹಿವಾಟು ಸೇರಿ ಜನರ ಬದುಕಿನಲ್ಲಿ ಹೊಡೆತ ಬಿದ್ದಿದೆ.
ತುಂಬಿದ ಭೀಮೆ: ಇನ್ನು ಈ ಭಾಗದ ನದಿಗಳೆಲ್ಲ ತುಂಬಿ ಹರಿಯುತ್ತಿವೆ. ಅದರಲ್ಲೂ ಭೀಮಾ ನದಿಯ ತುಂಬಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಹೀಗಾಗಿ ನದಿಪಾತ್ರದ ಜನರನ್ನು ಸುರಕ್ಷತೆ ಸ್ಥಳಕ್ಕೆ ಹೋಗಿದ್ದಾರೆ. ಹಲವು ಪ್ರದೇಶಗಳು ಮುಳುಗಡೆಯಾಗಿದ್ದು, ಜನರು ನಿರಾಶ್ರಿತ ಕೇಂದ್ರಗಳಲ್ಲಿ ವಾಸವಾಗಿದ್ದಾರೆ. ಕೆಲವು ಕಡೆಯಂತೂ ರಸ್ತೆಗಳು ಬಂದ್ ಆಗಿದ್ದು, ವಾಹನ ಸಂಚಾರ ಸಹ ಸ್ತಬ್ಧವಾಗಿದೆ.
ಬೆಳೆ ಹಾಳು: ಅಪಾರ ಪ್ರಮಾಣದ ಮಳೆಯಿಂದಾಗಿ ಬೆಳೆಗಳು ಸಂಪೂರ್ಣ ಹಾಳಾಗಿವೆ. ಹತ್ತಿ, ಮೆಣಸಿನಕಾಯಿ, ತೊಗರಿ ಪೂರ್ತಿ ಹಾಳಾಗಿದ್ದು, ರೈತರು ಕಂಗಾಲಾಗಿದ್ದಾರೆ. ಹೊಲಗಳ ತುಂಬಾ ನೀರು ತುಂಬಿಕೊಂಡಿದ್ದು, ಬೆಳೆದ ಬೆಳೆಯಲ್ಲಾ ಕೊಳೆತು ಹೋಗುತ್ತಿವೆ. ರೈತರು ಹೊಲಗಳಿಗೂ ಸಹ ಹೋಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಸಾಲ ಮಾಡಿ ಬಿತ್ತನೆ ಮಾಡಿ, ಔಷಧಿ, ಗೊಬ್ಬರ ಹಾಕಿದ್ದು, ಈಗ ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ.