ಪ್ರಜಾಸ್ತ್ರ ಸುದ್ದಿ
ರಾಮನಗರ(Ramanagara): ದನದ ಕೊಟ್ಟಿಗೆಯಲ್ಲಿ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕರ್ನಹಳ್ಳಿಯಲ್ಲಿ ಗುರುವಾರ ನಡೆದಿದೆ. ರಾಜು(34) ಹಾಗೂ ಲಕ್ಷ್ಮಿ(30) ಮೃತ ದಂಪತಿ ಎಂದು ತಿಳಿದು ಬಂದಿದೆ. ಅಕ್ಕೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ.
ಸುಮಾರು ಐದು ವರ್ಷಗಳ ಹಿಂದೆ ಮದುವೆಯಾಗಿದ್ದರು. ಇವರಿಗೆ ಮೂರು ವರ್ಷದ ಹೆಣ್ಣು ಮಗುವಿದೆ. ಸಾಲದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಪೊಲೀಸ್ ತನಿಖೆಯಿಂದ ಆತ್ಮಹತ್ಯೆಗೆ ಏನು ಕಾರಣ ಎನ್ನುವುದು ತಿಳಿದು ಬರಬೇಕಿದೆ.