ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್ ಗೆ ಹೋಗಿದ್ದು, ಗುರುವಾರ ಇದರ ವಿಚಾರಣೆ ನಡೆಸಿದ ಕೋರ್ಟ್ ತೀರ್ಪು ಕಾಯ್ದಿರಿಸಿದೆ. ನ್ಯಾಯಾಧೀಶರಾದ ಎಂ.ನಾಗಪ್ರಸನ್ ಅವರನ್ನೊಳಗೊಂಡ ನ್ಯಾಯಪೀಠ ಇವತ್ತು ಸಹ ಸುದೀರ್ಘ ವಿಚಾರಣೆ ನಡೆಸಿತು.
ಮುಖ್ಯಮಂತ್ರಿಗಳ ಪರ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ, ರಾಜ್ಯ ಸರ್ಕಾರದ ಪರ ಶಶಿಕಿರಣ್ ಶೆಟ್ಟಿ, ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಎಲ್ಲರ ವಾದ, ಪ್ರತಿವಾದ ಕೇಳಿದ ನ್ಯಾಯಾಧೀಶರು ತೀರ್ಪನ್ನು ಕಾಯ್ದಿರಿಸಿದ್ದಾರೆ. ಹೀಗಾಗಿ ಈ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ.