ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಶುಕ್ರವಾರ ಮುಂಜಾನೆ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ 15ನೇ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಜುಲೈ 21ರಂದು ಜಗದೀಪ್ ಧಂಖರ್ ಅವರು ದಿಢೀರ್ ಎಂದು ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಇಂಡಿಯಾ ಬಣದ ಅಭ್ಯರ್ಥಿ ಸುದರ್ಶನ್ ರೆಡ್ಡಿ ಅವರನ್ನು ಎನ್ ಡಿಎ ಬಣದ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಸೋಲಿಸುವ ಮೂಲಕ 15ನೇ ಉಪ ರಾಷ್ಟ್ರಪತಿಯಾಗಿ ಆಯ್ಕೆ ಆದರು. ಅವರಿಗೆ ಪ್ರಧಾನಿ ಮೋದಿ ಸೇರಿದಂತೆ ರಾಜಕೀಯ ಗಣ್ಯರು ಅಭಿನಂದನೆ ತಿಳಿಸಿದ್ದಾರೆ.