ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ ಆಗಿದ್ದಾರೆ. ಎನ್ ಡಿಎ ಅಭ್ಯರ್ಥಿ ಆಗಿ ಸ್ಪರ್ಧಿಸಿದ್ದ 452 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದಿದ್ದಾರೆ. ಇವರ ಪ್ರತಿಸ್ಪರ್ಧಿ ಇಂಡಿಯಾ ಬಣದ ಅಭ್ಯರ್ಥಿ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿಯವರು 300 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದಿದ್ದಾರೆ.
ಮಂಗಳವಾರ ಮತದಾನ ಪ್ರಕ್ರಿಯೆ ನಡೆಯಿತು. ರಾಜ್ಯಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಪಿ.ಸಿ ಮೋದಿ ಫಲಿತಾಂಶ ಘೋಷಿಸಿದ್ದಾರೆ. ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು ಎಂದಿದ್ದಾರೆ.