Ad imageAd image

ಕ್ರಿಕೆಟಿಗ ಚೇತೇಶ್ವರ ಪೂಜಾರ ರಾಜೀನಾಮೆ

Nagesh Talawar
ಕ್ರಿಕೆಟಿಗ ಚೇತೇಶ್ವರ ಪೂಜಾರ ರಾಜೀನಾಮೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಭಾರತ ಕ್ರಿಕೆಟ್ ತಂಡದ ಆಟಗಾರ ಚೇತೇಶ್ವರ ಪೂಜಾರ ಎಲ್ಲ ಮಾದರಿಯ ಕ್ರಿಕೆಟ್ ಆಟಕ್ಕೆ ನಿವೃತ್ತಿ ಘೋಷಿಸಿದ್ದಾರೆ. 37 ವರ್ಷದ ಚೇತೇಶ್ವರ ಪೂಜಾರ ನಿವೃತ್ತಿಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಘೋಷಿಸಿದ್ದಾರೆ. ಒಂದೂವರೆ ಪುಟಗಳ ಬರಹದ ಮೂಲಕ ತಮ್ಮ ಕ್ರಿಕೆಟ್ ಜರ್ನಿಯಲ್ಲಿ ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ. ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್, ಮಾಜಿ ಆಟಗಾರರಾದ ವಿವಿಎಸ್ ಲಕ್ಷ್ಮಣ್, ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್ ಸೇರಿದಂತೆ ಅನೇಕರು ಅವರ ಮುಂದಿನ ಜೀವನಕ್ಕೆ ಶುಭ ಕೋರಿದ್ದಾರೆ.

103 ಟೆಸ್ಟ್ ಪಂದ್ಯಗಳನ್ನು ಆಡಿದ್ದು 7,195 ರನ್ ಗಳಿಸಿದ್ದಾರೆ. ಅಜೇಯ 206 ಅಧಿಕ ಸ್ಕೋರ್ ಆಗಿದೆ. 19 ಶತಕ, 35 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಇನ್ನು 5 ಏಕದಿನ ಪಂದ್ಯಳನ್ನು ಆಡಿದ್ದು 51 ರನ್ ಗಳಿಸಿದ್ದಾರೆ. 2023ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ್ದು ಕೊನೆಯ ಟೆಸ್ಟ್ ಪಂದ್ಯವಾಗಿದೆ. 2016ರಲ್ಲಿ ಏಕದಿನ ಪಂದ್ಯವಾಡಿದ್ದೇ ಕೊನೆಯದಾಗಿದೆ. ಐಪಿಎಲ್ ನಲ್ಲಿ ಕೆಕೆಆರ್, ಆರ್ ಸಿಬಿ, ಪಂಜಾಬ್ ಪರ ಆಡಿದ್ದಾರೆ.

WhatsApp Group Join Now
Telegram Group Join Now
Share This Article