ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷಾಪರ್ಹ ಪದ ಬಳಕೆ ಪದ ಬಳಕೆ ಮಾಡಿರುವ ಆರೋಪವನ್ನು ಬಿಜೆಪಿ ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಬಂಧಿಸಲಾಗಿದೆ. ಹಿರೇಬಾಗೇವಾಡಿಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಸಂಸತ್ ನಲ್ಲಿ ಅಂಬೇಡ್ಕರ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಮಾನ ಮಾಡಿದ್ದಾರೆ ಎಂದು ಗುರುವಾರ ಸುವರ್ಣಸೌಧದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಸಿ.ಟಿ ರವಿ ಪ್ರಾಸಿಟ್ಯೂಟ್(ಸೂಳೆ) ಎನ್ನುವ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನುವ ಗಂಭೀರ ಆರೋಪ ಮಾಡಿದ್ದಾರೆ. ಹೀಗಾಗಿ ದೊಡ್ಡ ಮಟ್ಟದಲ್ಲಿ ಜಟಾಪಟಿ ನಡೆದಿದೆ. ನಿನಗೆ ತಾಯಿ ಇಲ್ಲವೇನೋ, ತಾಯಿ ಇಲ್ಲವೇನೋ, ಮಗಳು ಇಲ್ಲವೇನೋ ಎಂದು ಸಚಿವೆ ವಾಗ್ದಾಳಿ ನಡೆಸಿದರು.
ಸಿ.ಟಿ ರವಿ ಇದನ್ನು ತಳ್ಳಿ ಹಾಕಿ ಪ್ರತಿಭಟನೆ ಮಾಡುತ್ತಿದ್ದರು. ಅವರನ್ನು ಪೊಲೀಸರು ಹೊತ್ತುಕೊಂಡು ಹೋಗಿ ಬಂಧಿಸಲಾಗಿದೆ. ಬಿಎನ್ ಎಸ್ ಕಾಯ್ದೆ 75 ಹಾಗೂ 79 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಂದರೆ ಲೈಂಗಿಕ ಕಿರುಕುಳ, ಅಶ್ಲೀಲತೆ ತೋರುವುದು, ಮಹಿಳೆಗೆ ಅಗೌರವ ತೋರಿಸುವುದು ಈ ಅಡಿಯಲ್ಲಿ ಬರುತ್ತೆ. ಕಾಂಗ್ರೆಸ್ ದೌರ್ಜನ್ಯವೆಸಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.