ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ(Hubballi): ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸದನದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅಶ್ಲೀಲ ಪದ ಬಳಿಸಿದ್ದಾರೆ ಎನ್ನುವ ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲವರು ಸಿ.ಟಿ ರವಿ ಅಶ್ಲೀಲ ಪದ ಬಳಿಸಿದ್ದಾರೆ ಎನ್ನುತ್ತಾರೆ. ಇನ್ನು ಕೆಲವರು ಇಲ್ಲ ಎನ್ನುತ್ತಾರೆ. ಹೀಗಾಗಿ ಇದನ್ನು ಸಿಐಡಿ ತನಿಖೆಗೆ ಆದೇಶಿಸಿದ್ದೇನೆ ಎಂದರು.
ಇನ್ನು ಹಳೆ ಹುಬ್ಬಳ್ಳಿ ಠಾಣೆಯ ಪಿಎಸ್ಐ, ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಈ ಸಂಬಂಧ ಅವರು ದೂರು ಸಹ ಸಲ್ಲಿಸಿದ್ದಾರೆ. ಇದರ ಮಾತನಾಡಿದ ಗೃಹ ಸಚಿವರು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳಿಂದ ವರದಿ ತರಸಿಕೊಳ್ಳುತ್ತೇನೆ. ತಪ್ಪು ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.