ಪ್ರಜಾಸ್ತ್ರ ಸುದ್ದಿ
ಚಿಕ್ಕಮಗಳೂರು(Chikkamagaloru): ಬಿಜೆಪಿ ಎಂಎಲ್ಸಿ ಸಿ.ಟಿ ರವಿಗೆ ಮತ್ತೆ ಜೀವ ಬೆದರಿಕೆ ಕರೆ ಬಂದಿದೆಯಂತೆ. ವಾಟ್ಸಪ್ ಕಾಲ್ ಮೂಲಕ 15 ದಿನಗಳ ಗಡವು ಕೊಟ್ಟು ಎಚ್ಚರಿಕೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಳಸಿದ್ದಾರೆ ಎನ್ನಲಾಗುತ್ತಿರುವ ಆಕ್ಷೇಪಾರ್ಹ ಪದಬಳಕೆ ಸಂಬಂಧ ಕ್ಷಮೆ ಕೇಳಬೇಕೆಂದು ಹೇಳಿ ಬೆದರಿಕೆ ಹಾಕಲಾಗಿದೆಯಂತೆ.
ತಮಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಸಿ.ಟಿ ರವಿ ಆರೋಪಿಸಿದ್ದರು. ಅದರ ಬೆನ್ನಲ್ಲೆ ಈ ವಿಚಾರ ಬೆಳಕಿಗೆ ಬಂದಿದೆ. 15 ದಿನದೊಳಗಾಗಿ ಕ್ಷಮೆ ಕೇಳದಿದ್ದರೆ ಕೈ ಕಾಲು ಮುರಿದು ಕೊಲೆ ಮಾಡುವುದಾಗಿ ಹೇಳಿದ್ದಾರಂತೆ. ಸಿ.ಟಿ ರವಿ ಮಗನನ್ನು ಸಹ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದು, ಈ ಸಂಬಂಧ ಪೊಲೀಸರಿಗೆ ದೂರು ಸಲ್ಲಿಸಿದ್ದಾರಂತೆ.