ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಇಂದು ಮುಂಜಾನೆ ಬೇಕರಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಂಗಡಿ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ನಡೆದಿದೆ. ಮುಂಜಾನೆ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಸಿಲಿಂಡರ್ ಸ್ಫೋಟವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವ ಕೆಲಸ ಮಾಡಿತು.
ಹಾಸನ ಮೂಲದ ವೀರೂಪಾಕ್ಷ ಎಂಬುವರಿಗೆ ಈ ಬೇಕರಿ ಸೇರಿದೆ. ಈ ಘಟನೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಆಗಿಲ್ಲ. ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.