ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸೆಪ್ಟೆಂಬರ್ 1, ಅಕ್ಟೋಬರ್ 1ರಂದು ಸಿಲಿಂಡರ್(Gas Cylinder) ಬೆಲೆ ಏರಿಕೆ ಮಾಡಲಾಗಿತ್ತು. ಇದೀಗ ನವೆಂಬರ್ 1ರಂದು ಮತ್ತೆ ದರ ಏರಿಸುವ ಮೂಲಕ ಕಳೆದ ಮೂರು ತಿಂಗಳಿನಿಂದ ಸತತವಾಗಿ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿದೆ. 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆ 62 ರೂಪಾಯಿ ಏರಿಸಲಾಗಿದೆ. ಈ ಮೂಲಕ ದಿನದಿಂದ ದಿನಕ್ಕೆ ಸರ್ಕಾರಗಳು ಹೊಡೆತ ಕೊಡುತ್ತಿವೆ. ಇದು ಪರೋಕ್ಷವಾಗಿ ಸಾರ್ವಜನಿಕರ ಮೇಲೂ ಬರೆ ಎಳೆದಂತೆ.
ರಾಜಧಾನಿ ಬೆಂಗಳೂರಿನಲ್ಲಿ 19 ಕೆಜಿಯ ವಾಣಿಜ್ಯ ಸಿಲಿಂಡರ್ 1,879, 47ಕೆಜಿಯ ವಾಣಿಜ್ಯ ಸಿಲಿಂಡರ್ 4,695 ರೂಪಾಯಿ ಇದೆ. ಗೃಹ ಬಳಕೆ ಸಿಲಿಂಡರ್ ಬೆಲೆ ಏರಿಕೆಯಾಗಿಲ್ಲ. ದೆಹಲಿಯಲ್ಲಿ 19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆ 1,802 ಇದೆ. ಮುಂಬೈ, ದೆಹಲಿ, ಚೆನ್ನೈ, ಕೋಲ್ಕತ್ತಾದಲ್ಲಿ ಬೆಲೆ(Price Hike) ಏರಿಕೆ ಮಾಡಲಾಗಿದೆ.