ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ 48ನೇ ಹುಟ್ಟು ಹಬ್ಬದ ಹಿನ್ನಲೆಯಲ್ಲಿ D59 ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇದು ಸಿಂಧೂರ ಲಕ್ಷ್ಮಣ ಜೀವನಾಧರಿತ ಕಥೆ ಹೊಂದಿರುವ ಸಿನಿಮಾ ಎಂದು ಹೇಳಲಾಗುತ್ತಿದೆ. ಕಾಟೇರ ಬಳಿಕ ದರ್ಶನ್ ಜೊತೆಗೆ ನಿರ್ದೇಶ ತರುಣ್ ಕಿಶೋರ್ ಸುಧೀರ್ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ. ಹೀಗಾಗಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಪೋಸ್ಟರ್ ಬಿಡುಗಡೆ ಮಾಡುವ ಡಿ ಬಾಸ್ ಅಭಿಮಾನಿಗಳಿಗೆ ಖುಷಿ ನೀಡಲಾಗಿದೆ.
ಬುಲೆಟ್ ಬೆಲ್ಟ್ ಹಿಡಿದಿರುವ ರಕ್ತಸಿಕ್ತ ಕೈಯ ಪೋಸ್ಟರ್ ಇದಾಗಿದ್ದು, ಮತ್ತೊಂದು ಕ್ರಾಂತಿಯ ಕಥೆ ಹೇಳಲು ಸಜ್ಜಾಗಿದ್ದಾರೆ. ಶೈಲಜಾ ನಾಗ್, ಬಿ.ಸುರೇಶ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ವಿ.ಹರಿಕೃಷ್ಣ ಮ್ಯೂಸಿಕ್ ನೀಡುತ್ತಿದ್ದಾರೆ. ತರುಣ್ ಕಿಶೋರ್ ಸುಧೀರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟರ್ ಹಂಚಿಕೊಂಡು ನಟ ದರ್ಶನ್ ಗೆ ಜನ್ಮ ದಿನದ ಶುಭಾಶಗಳನ್ನು ತಿಳಿಸಿದ್ದಾರೆ.