ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಭಾರತೀಯ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರಿಗೆ ಕೇಂದ್ರ ಸರ್ಕಾರ ಶನಿವಾರ ಘೋಷಿಸಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ತನ್ನ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದೆ. ಸೆಪ್ಟೆಂಬರ್ 23ರಂದು ನಡೆಯುವ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಿದೆ.
ಮೋಹನ್ ಲಾಲ್ ಅವರು ಎರಡು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, 9 ಬಾರಿ ಕೇರಳ ರಾಜ್ಯ ಪ್ರಶಸ್ತಿ, 2001ರಲ್ಲಿ ಪದ್ಮಶ್ರೀ, 2019ರಲ್ಲಿ ಪದ್ಮಭೂಷಣ ಪ್ರಶಸ್ತಿ ಪಡೆದಿದ್ದಾರೆ. 40 ವರ್ಷಗಳ ಸಿನಿ ಬದುಕಿನಲ್ಲಿ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮಲಯಾಳಂ ಜೊತೆಗೆ ತೆಲುಗು, ಕನ್ನಡ, ಹಿಂದಿ, ತಮಿಳು ಚಿತ್ರಗಳಲ್ಲಿಯೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.




