ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಜಾಮೀನು ಮೇಲೆ ಹೊರಗೆ ಇದ್ದಾರೆ. ಸಾಕ್ಷಿಗಳ ಮೇಲೆ ಒತ್ತಡ ಹೇರುವ ಸಾಧ್ಯತೆಯಿದೆ ಎಂದು ಆರ್.ಆರ್ ನಗರ ಠಾಣೆ ಪೊಲೀಸರು ಗನ್ ಪರವಾನಿಗೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಿ, ಅವರ ಬಳಿಯಿದ್ದ ಗನ್ ಹಾಗೂ 5 ಜೀವಂತ ಗುಂಡುಗಳನ್ನು ವಶಕ್ಕೆ ಪಡೆದಿದ್ದರು. ಇದನ್ನು ಮರಳಿ ಕೊಡಿಸುವಂತೆ ನಟ ದರ್ಶನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ವಕೀಲರಾದ ಸುನಿಲ್ ಕುಮಾರ್ ಅವರು ದರ್ಶನ್ ಪರ ಅರ್ಜಿ ಸಲ್ಲಿಸಿದ್ದಾರೆ.
ದರ್ಶನ್ ಸೇರಿ ಇತರೆ ಆರೋಪಿಗಳ ಜಾಮೀನು ರದ್ದತಿಗೆ ಸುಪ್ರೀಂ ಕೋರ್ಟ್ ಗೆ ಸರ್ಕಾರ ಅರ್ಜಿ ಸಲ್ಲಿಸಿತ್ತು. ಜಾಮೀನು ರದ್ದತಿ ವಿಚಾರವನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಉಳಿದ ವಿಚಾರಗಳ ಕುರಿತಂತೆ ಆರೋಪಿಗಳಿಗೆ ನೋಟಿಸ್ ನೀಡಲಾಗಿದೆ.