ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಹಾಗೂ ಎ2 ಆರೋಪಿ ನಟ ದರ್ಶನ್ ಜಾಮೀನು(Bail) ಅರ್ಜಿಯನ್ನು 57ನೇ ಹೆಚ್ ಸಿಎಚ್ ಕೋರ್ಟ್ ತಿರಸ್ಕಾರ ಮಾಡಿದೆ. ಇದರ ಜೊತೆಗೆ ದರ್ಶನ್ ಮ್ಯಾನೇಜರ್ ನಾಗರಾಜು ಹಾಗೂ ಆಪ್ತ ಲಕ್ಷ್ಮಣ ಜಾಮೀನು ಅರ್ಜಿಯನ್ನು ಸಹ ಕೋರ್ಟ್ ತಿರಸ್ಕರಿಸಿದೆ. ಎ13 ದೀಪಕ್ ಹಾಗೂ ಎ8 ರವಿಶಂಕರಗೆ ಜಾಮೀನು ನೀಡಿದೆ. ಈ ಮೂಲಕ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಇದುವರೆಗೂ ಐವರಿಗೆ ಜಾಮೀನು ಸಿಕ್ಕಂತಾಗಿದೆ.
ದರ್ಶನ್ ಪರ ಸಿ.ವಿ ನಾಗೇಶ್, ಪವಿತ್ರಾಗೌಡ ಪರ ಸಿಬಾಸ್ಟಿನ್ ವಾದ ಮಂಡಿಸಿದರು. ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಪೊಲೀಸರ ಪರ ಪ್ರಸನ್ನಕುಮಾರ್ ವಾದ ಮಂಡಿಸಿದ್ದರು. ಜಿಲ್ಲಾ ನ್ಯಾಯಾಲಯದಲ್ಲಿ ನಟ ದರ್ಶನ್ ಸೇರಿದಂತೆ ಈ ನಾಲ್ವರಿಗೆ ಜಾಮೀನು ಅರ್ಜಿ ತಿರಸ್ಕಾರಗೊಂಡಿರುವುದರಿಂದ ಹೈಕೋರ್ಟ್ ಗೆ ಹೋಗುವ ಸಾಧ್ಯತೆಯಿದೆ. ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನಗೆ ಬೆನ್ನು ಸಮಸ್ಯೆ ತುಂಬಾ ಕಾಡುತ್ತಿದೆ. ಅವರನ್ನು ಪರೀಕ್ಷಿಸಿದ ವೈದ್ಯರು ಸ್ಕ್ಯಾನ್ ಮಾಡಿಸಲು ಹೇಳಿದ್ದು, ಆದರೆ ದರ್ಶನ್ ಒಪ್ಪುತ್ತಿಲ್ಲವೆಂದು ಹೇಳಲಾಗುತ್ತಿದೆ.