ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್, ಮಾಧ್ಯಮಗಳಲ್ಲಿ ತಮ್ಮ ವಿರುದ್ಧದ ವರದಿಗಳನ್ನು ಪ್ರಸಾರ ಮಾಡದಂತೆ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಕಳೆದ 80 ದಿನಗಳಿಂದ ನಟ ದರ್ಶನ್ ಸೇರಿ 17 ಆರೋಪಿಗಳು ಜೈಲಿನಲ್ಲಿದ್ದಾರೆ. ಈಗಾಗ್ಲೇ ಚಾರ್ಜ್ ಶೀಟ್ ಅನ್ನು ಪೊಲೀಸರು ಕೋರ್ಟ್ ಗೆ ಸಲ್ಲಿಸಿದ್ದಾರೆ. ಅದರಲ್ಲಿನ ಅನೇಕ ಪ್ರಮುಖ ಅಂಶಗಳು, ಕೆಲ ಫೋಟೋಗಳು ಬಹಿರಂಗವಾಗಿದ್ದು, ಮಾಧ್ಯಮಗಳಲ್ಲಿ ಬಂದು ಸಾಕಷ್ಟು ಸದ್ದು ಮಾಡುತ್ತಿವೆ. ಹೀಗಾಗಿ ಮಾಧ್ಯಮಗಳಲ್ಲಿ ವರದಿ ನಿರ್ಬಂಧಕ್ಕೆ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಇಂದು ಎ1 ಆರೋಪಿ ಪವಿತ್ರಾಗೌಡ, ಎ2 ನಟ ದರ್ಶನ್ ಸೇರಿದಂತೆ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಲಿದೆ. ಹೀಗಾಗಿ ಈ ಪ್ರಕರಣ ವಿಚಾರಣೆ ನಡೆಯಲಿದೆ. ನಟ ದರ್ಶನ್ ಈಗಾಗ್ಲೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ನಲ್ಲಿರುವ ಅಂಶಗಳನ್ನು ಗಮನಿಸಿ ಕೋರ್ಟ್ ಯಾವ ತೀರ್ಮಾನ ತೆಗೆದುಕೊಳ್ಳುತ್ತೆ, ಇಂದು ಜಾಮೀನು ಸಿಗುತ್ತಾ, ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಲಾಗುತ್ತಾ ಎನ್ನುವ ಕುತೂಹಲವಿದೆ.