ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ. ಇಂದು ವಿಚಾರಣೆ ನಡೆಸಿದ ಸೆಷನ್ ಕೋರ್ಟ್ ಸೋಮವಾರಕ್ಕೆ ಅರ್ಜಿ ಮುಂದೂಡಿದೆ. ಹೀಗಾಗಿ 2ನೇ ಬಾರಿಗೆ ನಟ ದರ್ಶನ್ ಹಾಗೂ ಅವರ ಕುಟುಂಬಸ್ಥರು, ಅಭಿಮಾನಿಗಳಿಗೆ ನಿರಾಸೆಯಾಗಿದೆ.
ದರ್ಶನ್ ಜಾಮೀನು ಅರ್ಜಿಯ ವಿರುದ್ಧ ಎಸ್ ಪಿಪಿ ಪ್ರಸನ್ನಕುಮಾರ್ ಆಕ್ಷೇಪಣೆ ಸಲ್ಲಿಸಿದ್ದಾರೆ. ಇನ್ನು ಎ2 ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ಸಹ ಮುಂದೂಡಿಕೆಯಾಗಿದೆ. ಇವರ ಜಾಮೀನಿಗೂ ಎಸ್ ಪಿಪಿ ಪ್ರಸನ್ನಕುಮಾರ್ ಆಕ್ಷೇಪಣೆ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಮೂವರಿಗೆ ಜಾಮೀನು ಸಕ್ಕಿದೆ. ಆದರೆ, ಶೂರಿಟಿ ನೀಡಲು ಯಾರೂ ಇಲ್ಲದ ಕಾರಣ ಎ15, ಎ16 ಹಾಗೂ ಎ17 ಆರೋಪಿಗಳು ತುಮಕೂರು ಜೈಲಿನಲ್ಲಿಯೇ ಇದ್ದಾರೆ.