ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ನಟ ದರ್ಶನ್ ಸಧ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೀಗಾಗಿ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಬೇಕು ಅನ್ನೋ ಸಂಬಂಧ ಅಧಿಕಾರಿಗಳು ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್ ಆದೇಶ ಕಾಯ್ದಿರಿಸಿದೆ.
ಇದರ ಜೊತೆಗೆ ದರ್ಶನ್ ಕಡೆಯಿಂದಲೂ ಅರ್ಜಿ ಸಲ್ಲಿಸಲಾಗಿದೆ. ಅವರಿಗೆ ಹಾಸಿಗೆ, ದಿಂಬು ಸೇರಿದಂತೆ ಕೆಲ ಮೂಲಭೂತ ವಸ್ತುಗಳ ಬೇಡಿಕೆ ವಿಚಾರ ಸಂಬಂಧ ಅರ್ಜಿ ಸಲ್ಲಿಸಲಾಗಿದೆ. ಇದರ ವಿಚಾರಣೆಯೂ ಬುಧವಾರ ನಡೆಯಿತು. ಈ ಎರಡು ಅರ್ಜಿಗಳ ವಿಚಾರಣೆಯನ್ನು 64ನೇ ಸಿಟಿ ಸಿವಿಲ್ ಕೋರ್ಟ್ ಪೂರ್ಣಗೊಳಿಸಿ, ಸೆಪ್ಟೆಂಬರ್ 9ರಂದು ಆದೇಶ ಕಾಯ್ದಿರಿಸಿದೆ.