ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸಾಕಷ್ಟು ವಿವಾದ ಪಡೆದುಕೊಂಡಿದೆ. ಈ ಸಂಬಂಧ ಇಂದು ಬಿಜೆಪಿ ತಂಡ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಜಿಲ್ಲಾಧಿಕಾರಿ ಭೂಬಾಲನ್ ಅವರನ್ನು ಭೇಟಿಯಾಗಿ ಮಾಹಿತಿ ಪಡೆದುಕೊಂಡರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿ, ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಸೂಚನೆ ಮೇರೆಗೆ ಒತ್ತುವರಿ ತೆರವುಗೊಳಿಸುತ್ತಿದ್ದೇವೆ ಎಂದರು.
ಇಂದೀಕರಣ ಎಂದರೆ ಗಣಕೀಕರಣ. ಇದು ಪ್ರತಿ ವರ್ಷ ನಡೆಯುತ್ತೆ. ನೋಟಿಸ್ ಕೊಡದೆಯೂ ಇಂದೀಕರಣವಾದ ಉದಾಹರಣೆಗಳಿವೆ. ವಕ್ಫ್ ಹಾಗೂ ಭೂಮಾಲೀಕರಿಗೆ ನೋಟಿಸ್ ಕೊಟ್ಟಿದ್ದೇವೆ. ಇಬ್ಬರನ್ನು ಕರೆದು ವಿಚಾರಣೆ ಮಾಡುತ್ತೇವೆ. ಮಾಲೀಕತ್ವ ಜಾಗದಲ್ಲಿ ಹಾಗೂ ಕಲಂ 9ರಲ್ಲಿ ವಕ್ಫ್ ಹೆಸರು ಹಾಕಿಲ್ಲ. 44 ಆಸ್ತಿಗಳಿಗೆ ನೋಟಿಸ್ ಕೊಡದೆ ಇಂದೀಕರಣ ಮಾಡಿದ್ದೇವೆ. ಇಂಡಿ ತಹಶೀಲ್ದಾರ್ 41 ಖಾತೆಗಳಿಗೆ ನೋಟಿಸ್ ಕೊಡದೆ ಗಣಕೀಕರಣ ಮಾಡಿದ್ದಾರೆ. ಅದೆಲ್ಲ ರದ್ದು ಮಾಡಿದ್ದೇವೆ. ನಾಳೆ ಪಹಣಿಯಿಂದ ವಕ್ಫ್ ಹೆಸರು ಹೋಗಲಿದೆ ಅಂತಾ ಹೇಳಿದರು.