ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಾಗಿರುವ ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶುಕ್ರವಾರ ಜಿಲ್ಲೆಯ ಗುಂದವಾನ, ನಂದರಗಿ, ಶೀಗನಾಪುರ, ಧೂಮಕನಾಳ, ದೇವರನಿಂಬರಗಿ, ಹಾಗೂ ಜಿಗಜೇವಣಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿರುವುದರಿಂದ ರೈತರ ಜಮೀನಿನಲ್ಲಿ ಕೆರೆ ಮತ್ತು ಹಳ್ಳದ ನೀರು ಹರಿಯುತ್ತಿರುವುದರಿಂದ ಬೆಳೆ ನಷ್ಟವಾಗಿರುವ ಕುರಿತು ವೀಕ್ಷಣೆ ನಡೆಸಿದರು. ಬೆಳೆ ಹಾನಿ ಕುರಿತು ಸಮೀಕ್ಷೆ ಕೈಗೊಂಡು ಒಂದು ವಾರದೊಳಗೆ ಸೂಕ್ತ ವರದಿಯನ್ನು ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ಅನುರಾಧ ವಸ್ತ್ರದ ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ ಖಡಗೇಕರ, ತಹಶೀಲ್ದಾರ್ ಸಂಜಯ್ ಇಂಗಳೆ, ಉಪ ಕೃಷಿ ನಿರ್ದೇಶಕ(ಇಂಡಿ) ಚಂದ್ರಕಾಂತ ಪವಾರ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಹುಲ ಭಾವಿದೊಡ್ಡಿ, ಸಹಾಯಕ ಕೃಷಿ ನಿರ್ದೇಶಕ ಮಹದೇವಪ್ಪ ಏವೂರ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಅಭಿಯಂತರ ಬನಸೋಡೆ ಬಾನಿ, ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯ ಸಹಾಯಕ ಅಭಿಯಂತರ ಜಮಾದಾರ್ ಮತ್ತು ಸಂಬಂಧಪಟ್ಟ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.