Ad imageAd image

ನವೋದಯ ಶಾಲೆ ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಡಿಸಿ, ಸಿಇಒ

ಆಲಮಟ್ಟಿಯ ಜವಾಹರ್  ನವೋದಯ ವಿದ್ಯಾಲಯಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬುಧವಾರ ಭೇಟಿ ನೀಡಿ ಅಲ್ಲಿನ  ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ

Nagesh Talawar
ನವೋದಯ ಶಾಲೆ ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಡಿಸಿ, ಸಿಇಒ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಆಲಮಟ್ಟಿಯ ಜವಾಹರ್  ನವೋದಯ ವಿದ್ಯಾಲಯಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬುಧವಾರ ಭೇಟಿ ನೀಡಿ ಅಲ್ಲಿನ  ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.      ವಿದ್ಯಾಲಯದ ಬೋಧನಾ ಗುಣಮಟ್ಟವನ್ನು ಹೆಚ್ಚಿಸಿ ಫಲಿತಾಂಶ ಹೆಚ್ಚಳಕ್ಕೆ ಕ್ರಮ ವಹಿಸಬೇಕು. ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ಬೆಳವಣಿಗೆ ದೃಷ್ಟಿಯಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿ, ಮಕ್ಕಳ ಕೌಶಲ್ಯತೆಯನ್ನು ಹೆಚ್ಚಿಸಲು ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಪಾಠ ಮಾಡಿ ಮಕ್ಕಳಿಗೆ ಪ್ರೇರಣೆಯಾದ ಡಿಸಿ ಹಾಗೂ ಸಿಇಒ:

ಈ ವೇಳೆ 10ನೇ ತರಗತಿಯ ಕೊಠಡಿಗೆ ತೆರಳಿ ವಿದ್ಯಾರ್ಥಿಗಳಿಗೆ ಭೂಗೋಳ, ಗಣಿತ, ಸಮಾಜ ವಿಜ್ಞಾನ ಸೇರಿದಂತೆ ಸಾಮಾನ್ಯ ಜ್ಞಾನದ ವಿಷಯದ ಬಗ್ಗೆ ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ರೇಖಾಗಣಿತ ಹಾಗೂ ಇಂಗ್ಲಿಷ್ ವ್ಯಾಕರಣದ ಕುರಿತು ತಿಳಿಸಿಕೊಟ್ಟರು.

ವಿದ್ಯಾರ್ಥಿ ಜೀವನವನ್ನು ಸುಂದರವಾಗಿಸಿಕೊಳ್ಳಿ, ಜ್ಞಾನಾರ್ಜನೆ ಪಡೆದುಕೊಳ್ಳಲು ಅಧ್ಯಯನಶೀಲತೆ ರೂಢಿಸಿಕೊಳ್ಳಬೇಕು. ಪ್ರತಿನಿತ್ಯದ ಪಾಠಗಳನ್ನು ಅಧ್ಯಯನ ಮಾಡುವ ಮೂಲಕ ಮನನ ಮಾಡಿಕೊಳ್ಳಬೇಕು. ಕಲಿತ ಶಾಲೆ ತಮ್ಮ ಊರಿಗೆ ಕೀರ್ತಿ ತರಬೇಕು. ಪಾಠದೊಂದಿಗೆ ಆಟೋಟಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ವಿದ್ಯಾಲಯದ ಪ್ರಾಂಶುಪಾಲರು ಸೇರಿದಂತೆ ಇತರ ಅಧಿಕಾರಿಗಳು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article