Ad imageAd image

ಇಂಡಿ: ಡೆಂಗ್ಯೂ ನಿಯಂತ್ರಣಕ್ಕೆ ಫಾಗಿಂಗ್ ಕ್ರಮಕ್ಕೆ ಡಿಸಿ ಸೂಚನೆ

ತಾಲೂಕಾ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬುಧವಾರ ಭೇಟಿ ನೀಡಿ ತಾಲೂಕಾ ಆಡಳಿತದ ಕಾರ್ಯನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು.

Nagesh Talawar
ಇಂಡಿ: ಡೆಂಗ್ಯೂ ನಿಯಂತ್ರಣಕ್ಕೆ ಫಾಗಿಂಗ್ ಕ್ರಮಕ್ಕೆ ಡಿಸಿ ಸೂಚನೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಇಂಡಿ(Indi): ತಾಲೂಕಾ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ(DC) ಟಿ.ಭೂಬಾಲನ್ ಅವರು ಬುಧವಾರ ಭೇಟಿ ನೀಡಿ ತಾಲೂಕಾ ಆಡಳಿತದ ಕಾರ್ಯನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು. ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಬಾಕಿ ಕಡತಗಳ ಪರಿಶೀಲನೆ, ನ್ಯಾಯಾಲಯ(Court) ಪ್ರಕರಣಗಳ ಕಡತ, ಆಧಾರ್ ನೋಂದಣಿ, ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ, ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆಯ ಪ್ರಗತಿ ಮಾಹಿತಿ, ಜಾತಿ-ಆದಾಯ(Cast-Income) ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.

ಪುರಸಭೆ ಕಚೇರಿಗೆ ಭೇಟಿ ನೀಡಿದ ಅವರು, ಡೆಂಗ್ಯೂ(Dengue) ನಿಯಂತ್ರಣಕ್ಕೆ ಫಾಗಿಂಗ್ ಸೇರಿದಂತೆ ಅಗತ್ಯ ಕ್ರಮ ವಹಿಸುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದರು. ಬಾಕಿ ಇರುವ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಸಂಗ್ರಹಿಸುವ ಆಸ್ತಿ(Tax) ಕರ, ನೀರಿನ ಶುಲ್ಕ ಸಂಗ್ರಹಣೆಯಲ್ಲಿ ಪ್ರಗತಿ ಸಾಧಿಸಬೇಕು. ಪುರಸಭೆಯಲ್ಲಿ ನಿರ್ವಹಿಸುತ್ತಿರುವ ಇ-ಆಫೀಸ್‌ಗಳ ಮೂಲಕ ಕಡತಗಳ ಮಾಹಿತಿ ಪಡೆದುಕೊಂಡು ಸಮರ್ಪಕವಾಗಿ ಕಾರ್ಯನಿರ್ವಹಿಸುವುದನ್ನು ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಪಟ್ಟಣದಲ್ಲಿನ ಇಂದಿರಾ ಕ್ಯಾಂಟಿನ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಇಂಡಿ ಉಪ ವಿಭಾಗಾಧಿಕಾರಿ(AC) ಆಬೀದ ಗದ್ಯಾಳ, ತಹಶೀಲ್ದಾರ್ ಸಂಜಯ ಇಂಗಳೆ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಇತ್ತೀಚೆಗಷ್ಟೇ ಸಿಂದಗಿಗೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಗಳು ತಾಲೂಕು ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಕೆಲವು ಸಲಹೆ, ಸೂಚನೆಗಳನ್ನು ನೀಡಿದ್ದರು.

WhatsApp Group Join Now
Telegram Group Join Now
Share This Article