ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಡಾ(MUDA) ಪ್ರಕರಣ ಸಂಬಂಧ ಬಿಜೆಪಿಯವರು ಮತ್ತೊಮ್ಮೆ ಪ್ರತಿಭಟನೆ ಮಾಡುತ್ತಿರುವುದರಲ್ಲಿ ಯಾವುದೇ ಹುರುಳಿಲ್ಲ. ಈಗಾಗ್ಲೇ ಮೈಸೂರು ಚಲೋ ಮಾಡಿದರು. ಅದಕ್ಕೆ ನಾವು ತಕ್ಕ ಉತ್ತರ ಕೊಟ್ಟಿದ್ದೇವೆ. ತಮ್ಮ ಆಂತರಿಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವ ಸಲುವಾಗಿ ಈ ರೀತಿ ಪ್ರತಿಭಟನೆ ಮಾಡುತ್ತಿದ್ದಾರೆ ಎನ್ನುವ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್(DK Shivakumar) ಹೇಳಿದ್ದಾರೆ.
ಈಗ ಮತ್ತೆ ಪ್ರತಿಭಟನೆ ಮಾಡುವವರನ್ನು ನಾವು ಬೇಡ ಎನ್ನಲು ಆಗುತ್ತದೆಯೇ ಬೇಡವೆಂದವರು ಯಾರು ಎಂದು ಪ್ರಶ್ನಿಸುವ ಮೂಲಕ, ಬಿಜೆಪಿಯ ಅಸಮಾಧಾನಿತ ಶಾಸಕರು, ಮಾಜಿ ಸಂಸದರು, ಮುಖಂಡರು ಸೇರಿ ಕೂಡಲಸಂಗಮದಿಂದ ಬಳ್ಳಾರಿಯವರೆಗೆ ಪಾದಯಾತ್ರೆ ನಡೆಸಲು ಸಜ್ಜಾಗುತ್ತಿರುವ ಸಂಬಂಧ ಬಿಜೆಪಿ ಕಾಲೆಳೆದರು. ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಮಾಜಿ ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಜಿ.ಎಂ ಸಿದ್ದೇಶ್ವರ, ಪ್ರತಾಪ್ ಸಿಂಹ ಸೇರಿ ಇತರರು ಸಭೆಯ ಮೇಲೆ ಸಭೆ ಮಾಡುತ್ತಿದ್ದಾರೆ. ಬಳ್ಳಾರಿ ಚಲೋಗೆ ಹೈಕಮಾಂಡ್ ಸಿಗ್ನಲ್ ಗಾಗಿ ಕಾಯುತ್ತಿದ್ದು, ಕುತೂಹಲ ಮೂಡಿಸಿದೆ.