Ad imageAd image

ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ.

Nagesh Talawar
ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಇದನ್ನು ವಿರೋಧಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ(Protest) ನಡೆಸಬೇಕು ಎಂದು ಕೆಪಿಸಿಸಿ(KPCC) ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿಯಾಗಿರುವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಜಿಲ್ಲಾಧ್ಯಕ್ಷರುಗಳಿಗೆ ಪತ್ರ ಬರೆದಿದ್ದಾರೆ.

ಆಗಸ್ಟ್ 19, ಸೋಮವಾರ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಮಾಜಿ ಶಾಸಕರು, ಪದಾಧಿಕಾರಿಗಳು ಕೂಡಿಕೊಂಡು ಪ್ರತಿಭಟನೆ ಮಾಡಬೇಕು. ಕನಿಷ್ಠ ಅರ್ಧ ಕಿಲೋ ಮೀಟರ್ ವಾದರೂ ಪಾದಯಾತ್ರೆ ಮಾಡಬೇಕು. ಜಿಲ್ಲಾಧಿಕಾರಿಗಳಿಗೆ ಜ್ಞಾಪನಾ ಪತ್ರ ನೀಡಬೇಕು. ಜೊತೆಗೆ ರಾಷ್ಟ್ರಪತಿಗಳಿಗೆ(President) ಇ ಮೇಲ್ ಮೂಲಕ ವಿರೋಧ ಪತ್ರ ಕಳಿಸಬೇಕು. ಇಷ್ಟು ಮಾತ್ರವಲ್ಲದೆ ಅಂದು ಮಾಡಿದ ಪ್ರತಿಭಟನೆಯ ಫೋಟೋ ಹಾಗೂ ವಿಡಿಯೋ ರಾಜ್ಯ ಕಚೇರಿಗೆ ಕಳಿಸಬೇಕು ಎಂದು ಸೂಚನೆ ನೀಡಿದ್ದಾರೆ.

WhatsApp Group Join Now
Telegram Group Join Now
Share This Article