ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಐಟಿ ಸಿಟಿಯಲ್ಲಿ ಹೆಚ್ಚುತ್ತಿರುವ ಟ್ರಾಫಿಕ್(Traffic Problem) ಸಮಸ್ಯೆ ನಿವಾರಿಸಲು ರಕ್ಷಣಾ ಇಲಾಖೆಯಿಂದ 22 ಎಕರೆ ಜಮೀನು ಖರೀದಿ ಸಂಬಂಧ ರಕ್ಷಣಾ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಾತನಾಡಿದ್ದೇವೆ ಎಂದು ಉಪ ಮುಖ್ಯಮಂತ್ರಿ(DK Shivakumar) ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಶನಿವಾರ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಈ ಬಗ್ಗೆ ಹೇಳಿದರು. ಈಗ 12 ಎಕರೆ ಜಮೀನು ಕೊಡಲು ಒಪ್ಪಿಗೆ ಕೊಟ್ಟಿದ್ದಾರೆ. ಈಜೀಪುರ ಮತ್ತು ಬೆಳಂದೂರು ನಡುವಿನ ರಸ್ತೆಗಾಗಿ ಟೆಂಡರ್ ಕರೆದಿದ್ದೇನೆ. ಹೀಗಾಗಿ ಲೆಫ್ಟಿನೆಂಟ್ ಜನರಲ್ ಬಸಂತ್ ಕುಮಾರ್ ರೆಪ್ಟ್ ವಾಲ್ ಅವರನ್ನು ಕರೆದು ಧನ್ಯವಾದ ಹೇಳಿದ್ದೇವೆ ಎಂದರು.
ಹೆಬ್ಬಾಳ ಕಡೆಗೂ 10 ಎಕರೆ ಜಾಗ ಕೇಳಿದ್ದೇವೆ. ಈ ಮೂಲಕ ಒಟ್ಟು 22 ಎಕರೆ ಜಾಗ(Land) ನೀಡಿ ಎಂದು ಪ್ರಸ್ತಾವ ಸಲ್ಲಿಸಿದ್ದೇವೆ. ಇನ್ನು ಅಕ್ಟೋಬರ್ 2ರಂದು ಗಾಂಧಿ(Gandhi Jayanti) ಜಯಂತಿ ನಿಮಿತ್ತ ಗಾಂಧಿ ಭವನದಿಂದ ವಿಧಾನಸೌಧ ಮುಂಭಾಗದಲ್ಲಿ ಗಾಂಧಿ ಪ್ರತಿಮೆವರೆಗೂ ಒಂದು ಕಿಲೋ ಮೀಟರ್ ನಡಿಗೆ ಹಮ್ಮಿಕೊಂಡಿದ್ದೇವೆ. ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿ ನೂರು ವರ್ಷವಾಗಿದೆ. ಹೀಗಾಗಿ ಜಿಲ್ಲಾ, ತಾಲೂಕು ಮತ್ತು ಪಾಲಿಕೆ ವ್ಯಾಪ್ತಿಯಲ್ಲಿ ಗಾಂಧಿ ನಡಿಗೆ ಹಮ್ಮಿಕೊಂಡಿದ್ದೇವೆ. ಒಂದು ವರ್ಷ ಒಂದೊಂದು ಕಡೆ ಕಾರ್ಯಕ್ರಮ ಮಾಡುತ್ತೇವೆ. ಪಕ್ಷಭೇದ ಮರೆತು ಎಲ್ಲರೂ ಭಾಗವಹಿಸಬೇಕು ಎಂದರು.