ಪ್ರಜಾಸ್ತ್ರ ಸುದ್ದಿ
ಮಂಡ್ಯ(Mandaya): ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಭಾಗವಹಿಸಿ ವಾಪಸ್ ಬರುತ್ತಿದ್ದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿದೆ. ಈ ವೇಳೆ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ. ಶ್ರೀರಂಗಪಟ್ಟಣದ ಗೌಡಹಳ್ಳಿ ಟಿಎಂ ಹೊಸೂರು ಹತ್ತಿರ ಅಪಘಾತ ನಡೆದಿದೆ. ವಾಹನ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಗಾಯಾಳು ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.