ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಡಿಸೆಂಬರ್ ನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿಕೆ ನೀಡಿದ್ದ ಚನ್ನಗಿರಿ ಶಾಸಕ ಶಿವಗಂಗಾಗೆ ನೋಟಿಸ್ ನೀಡಲಾಗುವುದು ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಶಾಸಕರು ಪಕ್ಷದ ಶಿಸ್ತು ಪಾಲಿಸಬೇಕು. ಚೌಕಟ್ಟು ಮೀರಬಾರದು. ಯಾವುದೇ ರೀತಿ ಗೊಂದಲ ಮೂಡಿಸಬಾರದು ಎಂದಿದ್ದಾರೆ.
ಈ ಹಿಂದೆ ಕಟ್ಟುನಿಟ್ಟಾಗಿ ಸೂಚನೆ ನೀಡಲಾಗಿದೆ. ಅದರೂ ಶಿವಗಂಗಾ ಅವರು ಮತ್ತೆ ಮತ್ತೆ ಹೇಳಿಕೆ ನೀಡುವುದು ಪಕ್ಷದ ಶಿಸ್ತು ಉಲ್ಲಂಘನೆಯಾಗುತ್ತದೆ. ಹೀಗಾಗಿ ಈ ಬಗ್ಗೆ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಹೇಳಿದ್ದಾರೆ.