ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ನರೇಗಾ ಯೋಜನೆ ಉಳಿಸುವ ಸಲುವಾಗಿ ಜನವರಿ 27 ಮಂಗಳವಾರದಂದು ರಾಜಭವನ ಚಲೋ ನಡೆಸಲಾಗುವುದು. ಪ್ರತಿ ಗ್ರಾಮ ಪಂಚಾಯ್ತಿ ಹಾಗೂ ತಾಲೂಕು ಮಟ್ಟದಲ್ಲಿ ಹೋರಾಟ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿ ತಾಲೂಕಿನಲ್ಲಿ 5 ಕಿಲೋ ಮೀಟರ್ ಪಾದಯಾತ್ರೆ ನಡೆಸಲಾಗುವುದು. ನರೇಗಾ ವಾಪಸ್ ಆಗುವ ತನಕ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು ಎಂದರು.
ಮಹಾತ್ಮ ಗಾಂಧಿ ಹೆಸರಿನಲ್ಲಿರುವ ಯೋಜನೆ ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿಯಾಗಿತ್ತು. 20 ವರ್ಷಗಳ ಹಿಂದೆ ಮನಮೋಹನ್ ಸಿಂಗ್ ಅವರ ಸರ್ಕಾರವಿದ್ದಾಗ ಜಾರಿಗೆ ತರಲಾಗಿತ್ತು. ದೇಶದ ಬಗ್ಗೆ ಪ್ರತಿಭಟನೆ ನಡೆಸಲಾಗುವುದು. ವಿಧಾನಸಭೆಯಲ್ಲೂ ಈ ಬಗ್ಗೆ ಪ್ರತಿಭಟನೆ ಹಾಗೂ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು.




