Ad imageAd image

ಗ್ಯಾರೆಂಟಿ ಯೋಜನೆ ನಿಲ್ಲಿಸಲು ವಿಪಕ್ಷದವರ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿಕೆಶಿ

ಉಪ ಚುನಾವಣೆ ಮುಗಿದ ಬಳಿಕ ಗ್ಯಾರೆಂಟಿ ಯೋಜನೆಗಳು ನಿಲ್ಲಲಿವೆ ಎಂದು ದೇವೇಗೌಡರು ಹೇಳಿದ್ದಾರೆ. ನಮ್ಮ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸಲು ವಿಪಕ್ಷದವರ ಹಣೆಯಲ್ಲಿ ಬರೆದಿಲ್ಲ

Nagesh Talawar
ಗ್ಯಾರೆಂಟಿ ಯೋಜನೆ ನಿಲ್ಲಿಸಲು ವಿಪಕ್ಷದವರ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿಕೆಶಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಉಪ ಚುನಾವಣೆ ಮುಗಿದ ಬಳಿಕ ಗ್ಯಾರೆಂಟಿ ಯೋಜನೆಗಳು ನಿಲ್ಲಲಿವೆ ಎಂದು ದೇವೇಗೌಡರು ಹೇಳಿದ್ದಾರೆ. ನಮ್ಮ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸಲು ವಿಪಕ್ಷದವರ ಹಣೆಯಲ್ಲಿ ಬರೆದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರೆಂಟಿ ಯೋಜನೆಗಳನ್ನು ಬಿಜೆಪಿ ನಿಲ್ಲಿಸಲು ಷಡ್ಯಂತ್ರ ರೂಪಿಸಿದೆ. ತಾಯಿಯಂದಿರ, ಸಹೋದರಿಯರಿಗೆ ನೀಡುತ್ತಿರುವ ಯೋಜನೆಗಳನ್ನು ತಪ್ಪಿಸಲು ಯತ್ನಿಸುತ್ತಿದ್ದ, ಜನರು ಹುಷಾರಾಗಿರಬೇಕು ಎಂದರು.

ಉಪ ಚುನಾವಣೆಯ ಮೂರು ಕ್ಷೇತ್ರಗಳಲ್ಲಿ ನಾವು ಗೆಲುವು ಸಾಧಿಸುತ್ತೇವೆ. ವಿಧಾನಸಭೆ ಚುನಾವಣೆಯಲ್ಲಿ ಜನರು ಕಾಂಗ್ರೆಸ್ಸಿಗೆ ಬೆಂಬಲಿಸಿದಂತೆ ಉಪ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸುತ್ತಾರೆ. ಪ್ರಧಾನಿ ಮೋದಿ 700 ಕೋಟಿ ರೂಪಾಯಿ ವಸೂಲಿ ಆರೋಪ ಸುಳ್ಳು. ಇದು ಸಾಬೀತಾದರೆ ಮುಖ್ಯಮಂತ್ರಿಗಳು ರಾಜೀನಾಮೆ ಕೊಡುವುದಾಗಿ ಬಹಿರಂಗ ಸವಾಲು ಹಾಕಿದ್ದಾರೆ. ಇದಕ್ಕಿಂತ ಮತ್ತೇನೆ ಬೇಕು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

WhatsApp Group Join Now
Telegram Group Join Now
Share This Article