ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಜನಸಂಖ್ಯೆ ಆಧಾರದ ಮೇಲೆ ವಿಧಾನಸಭೆ, ಲೋಕಸಭೆಯನ್ನು ಮರುವಿಂಗಡನೆ ವಿಚಾರವನ್ನು ವಿರೋಧಿಸಿ ಮಾರ್ಚ್ 22ರಂದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಸಭೆ ಕರೆದಿದ್ದಾರೆ. ಕರ್ನಾಟಕ, ತೆಲಂಗಾಣ, ಕೇರಳ, ಪಶ್ಚಿಮ ಬಂಗಾಳ, ಒಡಿಶಾ, ಪಂಜಾಬ್ ಸೇರಿದಂತೆ ಇತರೆ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರ ಸರ್ಕಾರ ಮಾಡಲು ಹೊರಟಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡಬೇಕಿದೆ. ಇದಕ್ಕಾಗಿ ಜಂಟಿ ಕ್ರಿಯಾ ಸಮಿತಿ ರಚಿಸಬೇಕು. ಒಕ್ಕೂಟ ವ್ಯವಸ್ಥೆ ಹಾಗೂ ರಾಜ್ಯಗಳ ಅಧಿಕಾರಿವನ್ನು ರಕ್ಷಿಸಲು ನಾವು ಸದಾ ಸಿದ್ಧ. ಮಾರ್ಚ್ 22ರಂದು ಪೂರ್ವನಿಗದಿ ಕಾರ್ಯಕ್ರಮ ಇರುವುದರಿಂದ ಸಭೆಯಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಡಿಸಿಎಂ ಭಾಗವಹಿಸಲಿದ್ದಾರೆ ಎಂದು ಪತ್ರ ಬರೆದಿದ್ದು, ಅದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.