ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಚಿಕ್ಕಪೇಟೆಯಲ್ಲಿ ವೈಟ್ ಟ್ಯಾಪಿಂಗ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಬೆಂಗಳೂರು ನಗರದಲ್ಲಿ ಈಗಾಗ್ಲೇ 10 ಸಾವಿರ ಗುಂಡಿಗಳನ್ನು ಮುಚ್ಚಿದ್ದೇವೆ. 695 ಕೋಟಿ ರೂಪಾಯಿ ವೆಚ್ಚದಲ್ಲಿ 350 ಕಿಲೋ ಮೀಟರ್ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. 4 ಸಾವಿರ ಕೋಟಿ ರೂಪಾಯಿಯಲ್ಲಿ 500 ಕಿಲೋಟರ್ ಮೀಟರ್ ರಸ್ತೆ ವೈಟ್ ಟ್ಯಾಪಿಂಗ್ ಮಾಡಲು ಈಗಾಗ್ಲೇ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.
ಬೆಂಗಳೂರು ಅಭಿವೃದ್ಧಿಗೆ ಬೆಂಗಳೂರು ಸಂಸದರು ತೆರಿಗೆ ಹಂಚಿಕೆಯ ಅನ್ಯಾಯದ ಬಗ್ಗೆ ಕೇಳುತ್ತಿಲ್ಲ. ಪ್ರಧಾನಿ ಮೋದಿ ಬೆಂಗಳೂರು ಅಭಿವೃದ್ಧಿಗೆ ನಯಾ ಪೈಸೆ ಕೊಟ್ಟಿಲ್ಲ. ಪ್ರಾಮಾಣಿಕವಾಗಿ ನಾವು ಬೆಂಗಳೂರು ಅಭಿವೃದ್ಧಿ ಮಾಡುತ್ತಿದ್ದೇವೆ ಎಂದರು.