ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಬೆಂಗಳೂರು ಜಲ ಮಂಡಳಿ ಹಾಗೂ ಕಾವೇರಿ ಆರತಿ ಸಮಿತಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮೂವರು ಸಂಗೀತ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಕಾವೇರಿ ಆರತಿಯನ್ನು ಸಾಹಿತ್ಯ ಹಾಗೂ ಸಾಂಸ್ಕೃತಿಕವಾಗಿ ಶ್ರೀಮಂತಗೊಳಿಸುವ ಉದ್ದೇಶ ಹೊಂದಿದೆ. ಹೀಗಾಗಿ ಜಾನಪದ ಸೊಬಗು, ಭಕ್ತಿ, ಧಾರ್ಮಿಕ ಭಾವನೆಯಿಂದ ಕೂಡಿರುವ ಗೀತೆ ರಚನೆ ಮಾಡಿಕೊಡಲು ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಸಾಧು ಕೋಕಿಲಾ, ಅರ್ಜುನ್ ಜನ್ಯ ಅವರಿಗೆ ಪತ್ರ ಬರೆದಿದ್ದಾರೆ.
ಈ ಕಾಲಘಟಕ್ಕೆ ತಕ್ಕಂತೆ ಅದ್ಭುತವಾಗಿ ಗೀತೆ ಮೂಡಿಬರಬೇಕು. ಕಾವೇರಿ ಮಾತೆಯ ಹಿನ್ನಲೆ ಸಂಪೂರ್ಣವಾಗಿ ಕಣ್ಣಿಗೆ ಕಟ್ಟುವಂತೆ ಇರಬೇಕು. ಕಾವೇರಿ ಪರಂಪರೆಯನ್ನು ದೇಶ, ವಿದೇಶಗಳಿಗೆ ಸಂಗೀತದ ಮೂಲಕ ತಿಳಿಸುವ ಹಿನ್ನಲೆಯಲ್ಲಿ ಸಾಹಿತ್ಯ ಹಾಗೂ ಸಂಯೋಜನೆ ಮಾಡಿಕೊಡುವಂತೆ ಹೇಳಿದ್ದಾರೆ. ಆಯ್ಕೆಯಾದ ಗೀತೆಯನ್ನು ಕಾವೇರಿ ಆರತಿ ಸಂದರ್ಭದಲ್ಲಿ ಪ್ರಸಾರ ಮಾಡಲಾಗುವುದು ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.