ಪ್ರಜಾಸ್ತ್ರ ಸುದ್ದಿ
ಕಠ್ಮಂಡು(Kathmandu): ನೆರೆಯ ನೇಪಾಳದಲ್ಲಿ ಯುವಕರು ನಡೆಸುತ್ತಿರುವ ಪ್ರತಿಭಟನೆ ಭುಗಿಲೆದ್ದಿದೆ. ಇದರಿಂದಾಗಿ ಸಾವು ನೋವುಗಳ ಸಂಖ್ಯೆ ಏರಿಕೆಯಾಗುತ್ತಿದೆ. ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆಯಲ್ಲಿ ಇದುವರೆಗೂ 25 ಜನರು ಸಾವನ್ನಪ್ಪಿದ್ದಾರೆ. 633 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ತ್ರಿಭವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸೇನೆ ತನ್ನ ವಶಕ್ಕೆ ಪಡೆದಿದೆ. ವಿಮಾನ ಹಾರಾಟ ಬಂದ್ ಮಾಡಲಾಗಿದೆ. ಬದುವಾರವೂ ಪ್ರತಿಭಟನೆ ಮುಂದುವರೆದಿದೆ. ಮಂಗಳವಾರ ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ. ಆದರೂ ಯುವಕರ ಪ್ರತಿಭಟನೆ ಮುಂದುವರೆದಿದೆ. ಭ್ರಷ್ಟಾಚಾರ ನಿಯಂತ್ರಿಸಬೇಕು. ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧ ತೆರವುಗೊಳಿಸಬೇಕು ಎಂದು ದೇಶದ ತುಂಬಾ ಪ್ರತಿಭಟನೆ ನಡೆಯುತ್ತಿವೆ.