ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ರಾಜ್ಯದಲ್ಲಿನ ವಿವಿಧ ಜಿಲ್ಲಾಸ್ಪತ್ರೆಗಳಲ್ಲಿ ಬಾಣಂತಿಯರ ಹಾಗೂ ಶಿಶುಗಳ ಸರಣಿ ಸಾವು ಪ್ರಕರಣಗಳು ದಾಖಲಾಗುತ್ತಿವೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿನ ಪ್ರಕರಣಗಳ ಬಳಿಕ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿಯೂ ಇಂತಹ ಘಟನೆಗಳು ನಡೆದಿವೆ. ಇಲ್ಲಿನ ವಾಸ್ತವ ಪರಿಸ್ಥಿತಿ ತಿಳಿದುಕೊಳ್ಳಲು ಭೇಟಿ ನೀಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ ವಿಜಯೇಂದ್ರ ಹೇಳಿದರು.
ಬಳ್ಳಾರಿಯಲ್ಲಿ 6 ಬಾಣಂತಿಯರು, ಹಲವು ಶಿಶುಗಳು ಮೃತಪಟ್ಟಿವೆ ಎಂದು ವಿರೋಧ ಪಕ್ಷದ ನಾಯಕರು ಈಗಾಗ್ಲೇ ಹೇಳಿದ್ದಾರೆ. ಸರ್ಕಾರದಿಂದ ಬಡವರಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ತಲೆ ಕೆಡಿಸಿಕೊಳ್ಳುತ್ತಿಲ್ಲ. ಈ ಬಗ್ಗೆ ತುರ್ತು ಕ್ರಮಗಳಾಗಬೇಕು ಎಂದರು. ಈ ವೇಳೆ ಮಾಜಿ ಡಿಸಿಎಂ ಅಶ್ವತ್ಥನಾರಾಯಣ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಸೇರಿದಂತೆ ಬಿಜೆಪಿ ಕೆಲ ನಾಯಕರು ಆಸ್ಪತ್ರೆಯ ವೈದ್ಯರು, ಅಧಿಕಾರಿಗಳೊಂದಿಗೆ ಮಾತನಾಡಿದರು.