ಪ್ರಜಾಸ್ತ್ರ ಸುದ್ದಿ
ಶ್ರೀನಗರ(Srinagara): ವಿಪರೀತ ಚಳಿಗೆ ಉಸಿರುಗಟ್ಟಿ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಕಣಿವೆ ನಾಡಿನಲ್ಲಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಈ ಒಂದು ಘಟನೆ ನಡೆದಿದೆ. ಬಾರಾಮುಲ್ಲಾ ಜಿಲ್ಲೆಯ ಊರಿಯಿಂದ ಬಂದಿದ್ದ ದಂಪತಿ ಮೂವರು ಮಕ್ಕಳೊಂದಿಗೆ ಶ್ರೀನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಮೃತಪಟ್ಟ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಶುಕ್ರವಾರ ಅಥವ ಶನಿವಾರ ಮೃತಪಟ್ಟಿರಬಹುದು ಎಂದು ಹೇಳಲಾಗುತ್ತಿದೆ. ಮೃತರ ಗುರುತು ಪತ್ತೆ ಹಚ್ಚುವ ಕೆಲಸ ನಡೆದಿದೆ. ಕಣಿವೆ ನಾಡಿನಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಅಪಾರ ಪ್ರಮಾಣದ ಚಳಿಯಿದೆ. ಹಿಮ ಎಲ್ಲೆಡೆ ಆವರಿಸುತ್ತಿದೆ. ಇದೇ ಪರಿಸ್ಥಿತಿ ಇನ್ನು ಕೆಲವು ದಿನಗಳ ಕಾಲ ಮುಂದುವರೆಯಲಿದೆ ಎಂದು ಹೇಳಲಾಗುತ್ತಿದೆ.