ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಹುಬ್ಬಳಿಯಿಂದ ಪುಣೆಗೆ ಹೊರಟಿದ್ದ ಖಾಸಗಿ ಬಸ್ ವೊಂದು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, 9 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.
ಈ ಅಪಘಾತಕ್ಕೆ ಏನು ಕಾರಣ ಅನ್ನೋದು ತಿಳಿದು ಬರಬೇಕಿದೆ. ಮೃತಪಟ್ಟ ಪ್ರಯಾಣಿಕರ ಗುರುತು ಪತ್ತೆ ಹಚ್ಚಿ ಕುಟುಂಬಸ್ಥರಿಗೆ ತಿಳಿಸುವ ಕೆಲಸ ನಡೆದಿದೆ. ದಿನದಿಂದ ದಿನಕ್ಕೆ ಅಪಘಾತ ಸಂಖ್ಯೆಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಪ್ರಯಾಣಿಕರಲ್ಲಿ ಆತಂಕ ಮೂಡಿದೆ.