ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಇಂದು ನಿಗದಿಯಾಗಿದ್ದ ದೆಹಲಿ ಮುಖ್ಯಮಂತ್ರಿ ಆಯ್ಕೆ ಸಭೆ ಮುಂದೂಡಿಕೆಯಾಗಿದೆ. 26 ವರ್ಷಗಳ ಬಳಿಕ ದೆಹಲಿ ಗದ್ದುಗೆಯನ್ನು ಬಿಜೆಪಿ ಹಿಡಿದಿದೆ. ಹೀಗಾಗಿ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ಕುತೂಹಲ ಸಾಕಷ್ಟಿದೆ. ಅದಕ್ಕೆ ಇಂದು ತೆರೆ ಬೀಳುತ್ತೆ ಎಂದುಕೊಳ್ಳುವಷ್ಟರಲ್ಲಿ ಸಭೆ(CLP Meeting) ಮುಂದೂಡಿಕೆಯಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರೊಂದಿಗೆ ಶಾಸಕರು ಕಳೆದ ವಾರ ಮಾತನಾಡಿದ್ದರು.
ಪ್ರಧಾನಿ ಮೋದಿ(Modi) ಫ್ರಾನ್ಸ್, ಅಮೆರಿಕ ಪ್ರವಾಸದಲ್ಲಿದ್ದು, ಅವರು ಬಂದ ಬಳಿಕ ಮುಖ್ಯಮಂತ್ರಿಗಳ ಆಯ್ಕೆ, ನೂತನ ಸಚಿವ ಸಂಪುಟ ರಚನೆ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಲಾಗುತ್ತಿದ್ದು, ಮಹಿಳೆಯರನ್ನು ಮುಖ್ಯಮಂತ್ರಿ ಮಾಡಬೇಕು ಎನ್ನುವ ಮಾತುಗಳು ಕೇಳಿ ಬಂದಿದ್ದು, ಈ ಕುರಿತು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆಯಂತೆ. 14 ರಾಜ್ಯಗಳಲ್ಲಿ ಬಿಜೆಪಿ(BJP) ಆಡಳಿತದಲ್ಲಿದ್ದು ಎಲ್ಲಿಯೂ ಮಹಿಳಾ ಮುಖ್ಯಮಂತ್ರಿ ಇಲ್ಲ. ಹೀಗಾಗಿ ದೆಹಲಿಯಲ್ಲಿ ಮಹಿಳಾ ಮುಖ್ಯಮಂತ್ರಿ ಮಾಡಬೇಕು ಎನ್ನುವ ಆಲೋಚನೆ ಇದೆಯಂತೆ. ಆದರೆ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಸೋಲಿಸಿರುವ ಪರ್ವೇಶ್ ವರ್ಮಾ ಮುಖ್ಯಮಂತ್ರಿ ರೇಸ್ ನಲ್ಲಿರುವ ಪ್ರಮುಖ ನಾಯಕರಾಗಿದ್ದಾರೆ.