Ad imageAd image

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಉಪ ಲೋಕಾಯುಕ್ತ ನ್ಯಾ.ಕೆ.ಎನ್ ಫಣೀಂದ್ರ

ಸಾರ್ವಜನಿಕ ಸಮಸ್ಯೆಗಳನ್ನು ಪರಿಹಾರ ಮಾಡುವುದು ಸರ್ಕಾರಿ ನೌಕರರ ಆದ್ಯತೆಯಾಗಬೇಕು. ಸಮಸ್ಯೆಗಳು ಉದ್ಭವವಾಗದಂತೆ ತಮಗೆ ವಹಿಸಿದ ಕಾರ್ಯದ ವ್ಯಾಪ್ತಿ, ಜವಾಬ್ದಾರಿ ಅರಿತುಕೊಂಡು

Nagesh Talawar
ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಉಪ ಲೋಕಾಯುಕ್ತ ನ್ಯಾ.ಕೆ.ಎನ್ ಫಣೀಂದ್ರ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಸಾರ್ವಜನಿಕ ಸಮಸ್ಯೆಗಳನ್ನು ಪರಿಹಾರ ಮಾಡುವುದು ಸರ್ಕಾರಿ ನೌಕರರ ಆದ್ಯತೆಯಾಗಬೇಕು. ಸಮಸ್ಯೆಗಳು ಉದ್ಭವವಾಗದಂತೆ ತಮಗೆ ವಹಿಸಿದ ಕಾರ್ಯದ ವ್ಯಾಪ್ತಿ, ಜವಾಬ್ದಾರಿ ಅರಿತುಕೊಂಡು ಕಾರ್ಯ ನಿರ್ವಹಿಸಬೇಕು. ಅಧಿಕಾರಿಗಳು ಸಾರ್ವಜನಿಕರೊಂದಿಗೆ ತಾಳ್ಮೆ ಹಾಗೂ ಸೌಜನ್ಯದಿಂದ ವರ್ತಿಸಿ, ಅವರ ಸಮಸ್ಯೆ ಆಲಿಸಿ ಪರಿಹಾರ ಒದಗಿಸುವ ಮೂಲಕ ಸಾರ್ವಜನಿಕ ಆಡಳಿತ ಗುಣಮಟ್ಟ ಹೆಚ್ಚಿಸಬೇಕು ಎಂದು ಕರ್ನಾಟಕ ಉಪ(lokayukta) ಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಹೇಳಿದರು. ಗುರುವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾವುದೇ ಆಮಿಷಕ್ಕೆ ಒಳಗಾಗದೇ ಸಂದರ್ಭಾನುಸಾರ ಕಾನೂನು ನಿಯಮಾವಳಿಗಳ ಪ್ರಕಾರ ಭ್ರಷ್ಟಾಚಾರರಹಿತ ಸೇವೆ ಸಲ್ಲಿಸುವುದು ಪ್ರತಿಯೊಬ್ಬ ನೌಕರರ ಕರ್ತವ್ಯವಾಗಿದೆ. ಅರ್ಹ ಫಲಾನುಭವಿಗಳಿಗೆ ದೊರೆಯಬೇಕಾದ ಸೇವೆಯಲ್ಲಿ ಯಾವುದೇ ವಿಳಂಬವಾಗದಂತೆ ಕಾರ್ಯ ನಿರ್ವಹಿಸಿ, ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಸಾರ್ವಜನಿಕರ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಂಡು ಜನರಿಗೆ ಸರ್ಕಾರಿ ಸೌಲಭ್ಯ ಸವಲತ್ತುಗಳು ಒದಗಿಸಲು ಯಾವುದೇ ವಿಳಂಬವಾಗದಂತೆ ನಿಗದಿತ ಸಮಯದಲ್ಲಿ ಯೋಜನೆಗಳ ಸಮರ್ಪಕ ಅನುಷ್ಠಾನ ಮಾಡಲು ಅಧಿಕಾರಿಗಳು  ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಲೋಕಾಯಕ್ತಕ್ಕೆ ಒಳಪಡದ ಪ್ರಕರಣಗಳಲ್ಲಿ ಕಾನೂನು(Law) ಸೇವಾ ಪ್ರಾಧಿಕಾರದ ವತಿಯಿಂದ ಅರ್ಹರಿಗೆ ಉಚಿತವಾಗಿ(Free) ಕಾನೂನು ಸಲಹೆ ಹಾಗೂ ಮಾರ್ಗದರ್ಶನ ನೀಡಲಾಗುವುದು. ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು. ದೂರುದಾರರು ತಮ್ಮ ಕುಂದುಕೊರತೆ ಹಾಗೂ ಪರಿಹಾರದ ಬಗ್ಗೆ ನಮೂನೆ-1 ಮತ್ತು 2ನ್ನು ಭರ್ತಿ ಮಾಡಿ ಸ್ಪಷ್ಟವಾಗಿ ದಾಖಲಿಸಬೇಕು. ದೂರಿನೊಂದಿಗೆ ದೂರಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಕ್ರಮಬದ್ಧವಾಗಿ  ದೂರು ಅರ್ಜಿಯನ್ನು ಸಲ್ಲಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ ಸೋನಾವಣೆ, ವಿಚಾರಣೆ ಶಾಖೆಯ ಉಪ ನಿಬಂಧಕರಾದ ಪ್ರಕಾಶ ಎಲ್.ನಾಡಿಗೇರ, ಲೋಕಾಯುಕ್ತದ ಕಾನೂನು ಅಭಿಪ್ರಾಯದ ಸಹಾಯಕ ನಿಬಂಧಕರಾದ ಶುಭವೀರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಎಸ್.ಹಾಗರಗಿ, ಉಪ ಲೋಕಾಯುಕ್ತ ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ.ಪಾಟೀಲ, ವಿಜಯಪುರ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಟಿ.ಮಲ್ಲೇಶ್, ಲೋಕಾಯುಕ್ತ ಡಿವೈಎಸ್‌ಪಿ ಸುರೇಶ ರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು. ರಾಜಶೇಖರ ದೈವಾಡಿ ಅವರು ಕಾರ್ಯಕ್ರಮ ನಿರ್ವಹಿಸಿದರು.

WhatsApp Group Join Now
Telegram Group Join Now
Share This Article