ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ದಿಢೀರ್ ರಾಜೀನಾಮೆ ನೀಡಿದ್ದಾರೆ. 74 ವರ್ಷದ ಧನ್ಕರ್ ಅವರು ಅನಾರೋಗ್ಯದ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ. ಮುಂಗಾರು ಅಧಿವೇಶನ ಆರಂಭದಲ್ಲಿ ಇವರ ರಾಜೀನಾಮೆ ಸಾಕಷ್ಟು ಅನುಮಾನ ಮೂಡಿಸಿದೆ. ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಹಲವು ಪ್ರಶ್ನೆಗಳನ್ನು ವ್ಯಕ್ತಪಡಿಸಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.
ಸೋಮವಾರ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಕಲಾಪ ಸಮಿತಿ ಸಭೆ ಕರೆದಿದ್ದರು. ಅದರಲ್ಲಿ ಭಾಗವಹಿಸಿ ಚರ್ಚಿಸಿದ್ದಾರೆ. ಸಂಜೆ 4.30ಕ್ಕೆ ಮತ್ತೆ ಸಭೆ ಕರೆಯಲಾಗಿತ್ತು. ಇದಕ್ಕೆ ಸಚಿವರಾದ ಜೆ.ಪಿ ನಡ್ಡಾ, ಕಿರಣ್ ರಜಿಜು ಗೈರಾಗಿದ್ದರು. ಈ ಬಗ್ಗೆ ಅವರು ಧನ್ಕರ್ ಅವರಿಗೂ ತಿಳಿಸಿರಲಿಲ್ಲ. ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಸಭೆ ನಡೆಸುವುದಾಗಿ ಹೇಳಿದ್ದರು. ಈಗ ನೋಡಿದರೆ ಅವರ ರಾಜೀನಾಮೆ ಸಂಚಲನ ಮೂಡಿಸಿದೆ.