ಪ್ರಜಾಸ್ತ್ರ ಸುದ್ದಿ
ದಾವಣಗೆರೆ(Davanagere): ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜೆ.ಜೆ ಹಳ್ಳಿ ಗ್ರಾಮದ ಹತ್ತಿರ ನಿನ್ನೆ ಬೈಕ್ ಗುದ್ದಿದ ಪರಿಣಾಮ ಗಾಯಗೊಂಡಿದ್ದ ಉಪ ಸ್ಪೀಕರ್ ರುದ್ರಪ್ಪ ಲಮಾಣಿ ಅವರನ್ನು ಬೆಂಗಳೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ದಾವಣಗೆರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ವೈದ್ಯರು ಆರೋಗ್ಯದ ಬಗ್ಗೆ ಸಧ್ಯಕ್ಕೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಹೇಳಲಾಗುತ್ತಿದೆ.
ನಿನ್ನೆ ಬಜೆಟ್ ಮುಗಿಸಿಕೊಂಡು ಹಾವೇರಿಗೆ ಹೊರಟಿದ್ದರು. ಜೆ.ಜೆ ಹಳ್ಳಿ ಹತ್ತಿರದ ರಾಷ್ಟ್ರೀಯ ಹೆದ್ದಾರಿ ಬಳಿ ಕಾರು ನಿಲ್ಲಿಸಿ ಕಳೆಗೆ ಇಳಿದಿದ್ದಾರೆ. ಈ ವೇಳೆ ವೇಗವಾಗಿ ಬಂದ ಬೈಕ್ ವೊಂದು ಇವರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಹಣೆ, ಗದ್ದ, ಬಲ ಮೊಣಕಾಲು ಸೇರಿ ಇತರೆ ಕಡೆ ಗಾಯಗಳಾಗಿವೆ. ಹಿರಿಯೂರಲ್ಲಿ ಚಿಕಿತ್ಸೆ ಕೊಡಿಸಿ ದಾವಣಬೆರೆಯ ಎಸ್.ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತಂಕ ಪಡುವಂತ್ತುದ್ದ ಏನಿಲ್ಲ ಎಂದು ಹೇಳಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆಯಂತೆ.