ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ರಾಜ್ಯದಲ್ಲಿ ನಕಲಿ ವೈದ್ಯರ ಜಾಲ ಪತ್ತೆಯಾಗಿದೆ. ಇಂದು ಪ್ರತಿಯೊಂದು ಊರಿನಲ್ಲಿ ಇಂತಹ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಜನರ ಜೀವದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ. ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದವರು, ಪರವಾನಿಗೆ ಪಡೆಯದೆ ಇರುವವರು ಸಕ್ರಿಯರಾಗಿರುವುದು ಕಂಡು ಬಂದಿದೆ. ಆರೋಗ್ಯ ಕಳೆದೊಂದು ವರ್ಷದಿಂದ ನಡೆಸಿದ ಕಾರ್ಯಾಚರಣೆಯಲ್ಲಿ 256 ನಕಲಿ ವೈದ್ಯರು ಪತ್ತೆಯಾಗಿದ್ದಾರೆ.
ಉತ್ತರ ಹಾಗೂ ಕಲ್ಯಾಣ ಕರ್ನಾಟಕದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ಕಲಬುರಗಿಯಲ್ಲಿ 111 ನಕಲಿ ವೈದ್ಯರು ಪತ್ತೆಯಾಗಿದ್ದಾರೆ. ನಕಲಿ ಆಸ್ಪತ್ರೆ, ಕ್ಲಿನಿಕ್, ಲ್ಯಾಬ್ ನಡೆಸುತ್ತಿರುವುದು ಕಂಡು ಬಂದಿದೆ. ಇದರಲ್ಲಿ ಅಲೋಪಥಿ, ಹೋಮಿಯೋಪಥಿ, ನ್ಯಾಚರೋಪಥಿ, ಆಯುರ್ವೇದ, ಯುನಾನಿ ನಕಲಿ ವೈದ್ಯರು ಕಂಡು ಬಂದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ 2024-25ನೇ ಸಾಲಿನಲ್ಲಿ 89 ನಕಲಿ ಕ್ಲಿನಿಕ್ ಮುಚ್ಚಿಸಲಾಗಿದೆ.